ನಗು ಫೌಂಡೇಶನ್‌ನಿಂದ ಸರಕರಿ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ

ಮಾನ್ವಿ,ಜು.೦೪-
ತಾಲೂಕಿನ ರಂಗದಾಳ ಗ್ರಾಮದಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಸಂಯೋಜಕ ಎಂ. ಯೂನುಸ್ ರವರು ನಗು ಫೌಂಡೇಶನ್ ಬೆಂಗಳೂರು ರವರಿಂದ ಶಾಲೆಯ ಮಕ್ಕಳಿಗಾಗಿ ಉಚಿತವಾಗಿ ನೀಡಿದ ಕ್ರೀಡಾ ಸಾಮಾಗ್ರಿಗಳನ್ನು ಮುಖ್ಯ ಗುರುಗಳಾದ ಸುಧಾಕರ್ ರವರಿಗೆ ಹಸ್ತಾಂತರಿಸಿ ಮಾತನಾಡಿ ಶಾಲೆಯಲ್ಲಿ ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಶಿಕ್ಷಣ ಇಲಾಖೆಯಿಂದ ಅನೇಕ ಸುಧಾರಣೆಗಳನ್ನು ಮಾಡಲಾಗುತ್ತಿದ್ದು.
ಮಕ್ಕಳಿಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ ಹಾಗೂ ತರಗತಿಗಳಲ್ಲಿ ಸ್ಮಾರ್ಟ್ ಕ್ಲಾಸ್‌ಗಳ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದೆ ವೇಳೆಯಲ್ಲಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್‌ಗೆ ಚಾಲನೆ ನೀಡಿದರು.
ಶಾಲೆಯ ಸಹ ಶಿಕ್ಷಕ ಎಮ್.ಡಿ ಜಾವೀದ್, ಅತಿಥಿ ಶಿಕ್ಷಕಿ ತಿಮ್ಮವ್ವ ಹಾಗು ವಿದ್ಯಾರ್ಥಿಗಳು ಸೇರಿ ಇನ್ನಿತರರು ಇದ್ದರು.