ನಗೆ ಹಬ್ಬ ಕಾರ್ಯಕ್ರಮ ಮೂಲಕವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ

ಕಲಬುರಗಿ,ಮೇ.8: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ವತಿಯಿಂದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ನಗೆ ಹಬ್ಬ ಕಾರ್ಯಕ್ರಮ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.

ಕಲಬುರಗಿ ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಅವರು ತಮ್ಮ ಹಾಸ್ಯ ಶೈಲಿಯ ಮೂಲಕ ವಿದ್ಯಾರ್ಥಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಗಿರೀಶ ಡಿ. ಬದೋಲೆ ಅವರು ಎಲ್ಲರಿಗೆ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಇದೇ ಸಂದರ್ಭದಲ್ಲಿ ಕಲಬುರಗಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗ್ರಾಮೀಣ ಕೈಗಾರಿಕೆ) ಉಪನಿರ್ದೇಶಕ ಅಬ್ದುಲ್ ಅಜೀಮ್, ಕಾಲೇಜು ಪ್ರಾಂಶುಪಾಲರು, ಶಿಕ್ಷಕರು, ಕಾಲೇಜು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.