
ಬಳ್ಳಾರಿ,ಏ.25: ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ, ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಅವರ 94 ನೇ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ತುಕಾರಾಂ ರಾವ್ ಬಿ.ವಿ. ಅವರು ಡಾ.ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎ.ವೀರೇಶ್, ವ್ಯವಸ್ಥಾಪಕ ಅರುಣ್‍ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರ.ದ.ಸ ವಿ.ಸಿ.ಗುರುರಾಜ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಅಭಿವೃದ್ಧಿ ಅಧಿಕಾರಿ ಈರಪ್ಪ, ಪ್ರ.ದ.ಸ ಗುರುಲಿಂಗ, ವಾಹನ ಚಾಲಕ ವೈ.ಮಲ್ಲೇಶಪ್ಪ, ಹನುಮೇಶ್, ಲಿಂಗರಾಜು ಇದ್ದರು.