ನಟಿ ಪ್ರೇಮಾಗೆ `ವೆಡ್ಡಿಂಗ್ ಗಿಫ್ಟ್’

ಹಿರಿಯ ನಟಿ ಪ್ರೇಮಾ ನಾಲ್ಕು ವರ್ಷಗಳ ಬಳಿಕ ಹಿರಿತೆರೆಗೆ ಮರಳಿ ಬಂದಿದ್ದಾರೆ. ಅದುವೇ ” ವೆಡ್ಡಿಂಗ್ ಗಿಫ್ಟ್”  ಚಿತ್ರದ ಮೂಲಕ. ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ ಚಿತ್ರದಲ್ಲಿ  ವಕೀಲೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ವೆಡ್ಡಿಂಗ್ ಗುಪ್ಟ್ “ಚಿತ್ರದ ಮೊದಲ ಸನ್ನಿವೇಶಕ್ಕೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆರಂಭ‌ ಫಲಕ ತೋರಿದರು. ನಟಿ ಪ್ರೇಮ ಕ್ಯಾಮೆರಾ ಚಾಲನೆ ಮಾಡಿ ಚಿತ್ರಕ್ಕೆ ಶುಭ ಹಾರೈಸಿದರು.

ಈ ವೇಳೆ ನಿರ್ದೇಶಕ ಹಾಗೂ ನಿರ್ಮಾಪಕ ವಿಕ್ರಂಪ್ರಭು, ಚಿತ್ರದ ಶೀರ್ಷಿಕೆ ಕೇಳುತ್ತಿದ್ದ ಹಾಗೆ, ಕೌಟುಂಬಿಕ ಚಿತ್ರ ಇರಬಹುದು ಎನ್ನುವ ಭಾವನೆ ಬರದಹುದು.ಇದೊಂದು ಡಾರ್ಕ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಚಿತ್ರ. ಬೆಂಗಳೂರು, ಚಿಕ್ಕಮಗಳೂರು, ಮಂಗಳೂರಿನಲ್ಲಿ  ನಲವತ್ತೈದು ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ ಎನ್ನುವ ವಿವರ ನೀಡಿದರು.

ನಾಯಕ ನಿಶಾನ್ ನಾಣಯ್ಯ, ಮಲೆಯಾಳಂ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಮೊದಲ ಚಿತ್ರ. ಕಥೆ ತುಂಬಾ ಇಷ್ಟವಾಯಿತು ವಿಲಾಸ್ ಎನ್ನುವ  ಪಾತ್ರ ಮಾಡುತ್ತಿದ್ದೇನೆ ಎಂದರು. ನಾಯಕಿ ಸೋನು ಗೌಡ,  ಗಂಡ-ಹೆಂಡತಿಯಲ್ಲಿ ಯಾವತ್ತೂ ನನ್ನದು ಎನ್ನುವ ವಿಷಯ  ಬರಕೂಡದು.. ನಮ್ಮದು ಅಂತ ಇರಬೇಕು. ಯಾವಾಗ ನನ್ನದು ಅಂತ ಬರುತ್ತದೆಯೋ, ಆಗ ಅವರಿಬ್ಬರ ನಡುವೆ ಏನಾಗುತ್ತದೆ. ಎಂಬುದೇ ಕಥಾಹಂದರ‌ಹೊಂದಿದೆ‌‌ ಎಲ್ಲರಿಗೂ ಹಿಡಿಸಲಿದೆ ಎಂದರು.

ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಛಾಯಾಗ್ರಹಕ ಉದಯಲೀಲ ತಮ್ಮ ತಮ್ಮ ಕೆಲಸದ ಬಗ್ಗೆ ಮಾಹಿತಿ ಹಂಚಿಕೊಂಡರು. ಪವಿತ್ರ ಲೋಕೇಶ್, ಯಮುನ ಶ್ರೀನಿಧಿ ಮುಂತಾದವರು  ಚಿತ್ರದ ತಾರಾಬಳಗದಲ್ಲಿದ್ದಾರೆ.