ನಟಿ ಮೇಘನಾ ರಾಜ್ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನ

ಬಾಲಿವುಡ್ ಗಣ್ಯರಾದ ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರು ಸ್ವೀಕರಿಸಿದ  ಪ್ರತಿಷ್ಠಿತ ಪ್ರಶಸ್ತಿ  ಇದೀಗ  ಕನ್ನಡ ನಟಿ ಮೇಘನಾರಾಜ್ ಪಾಲಾಗಿದೆ.

ಅಮೇರಿಕಾದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್” ಕಾರ್ಯಕ್ರಮದಲ್ಲಿ  ಫಾಗ್ ಹೀರೋ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದ್ದಾರೆ‌.

ಕಳೆದ ಎರಡು ವರ್ಷಗಳ ನಂತರ  ಬಾರಿ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದ್ದು ಗಣ್ಯಾತಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ. ನಟಿ ಮೇಘನಾ ರಾಜ್ ಸಂತಸ ವ್ಯಕ್ತಪಡಿಸಿ, ಬಾಲಿವುಡ್ ಮೇರು ನಟರು ಪಡೆದ ಪ್ರಶಸ್ತಿ ತಮಗೆ ಸಿಕ್ಕಿರುವುದು ಖುಷಿಯಾಗಿದೆ  ಎಂದಿದ್ದಾರೆ.

ಈ ತಿಂಗಳ 21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದಿದ್ದಾರೆ.