ನಟ ಕೋಮಲ್ ಈಗ ಕೋಣ

ನಟ ಕೋಮಲ್ “ಕೋಣ”ನಾಗಿದ್ದಾರೆ. ಅರೆ ಅನ್ಯತಾ  ಭಾವಿಸಬೇಡಿ, ಕೋಮಲ್ ಅಭಿನಯಿಸುತ್ತಿರುವ ಚಿತ್ರದ ಹೆಸರು “ಕೋಣ”. ಇದು ಪ್ಯಾನ್ ಇಂಡಿಯಾ ಚಿತ್ರ ಇದು. “ಕೋಣ” ಚಿತ್ರದ ಶೀರ್ಷಿಕೆ ಹಾಗೂ ಪೆÇೀಸ್ಟರ್  ಬಿಡುಗಡೆಯಾಗಿದ್ದು ಕುತೂಹಲ ಕೆರಳಿಸಿದ್ದು ಚಿತ್ರ ಐದು ಭಾಷೆಯಲ್ಲಿ ನಿರ್ಮಾಣವಾಗಲಿದೆ.

ಡಾರ್ಕ್ ಕಾಮಿಡಿ ಜಾನರ್ ಇರುವ ಚಿತ್ರವನ್ನು ಈ ಹಿಂದೆ ಜಗ್ಗೇಶ್ ಅಭಿನಯಿಸಿದ್ದ “8 ಎಂಎಂ” ಚಿತ್ರ ನಿರ್ದೇಶಿಸಿದ್ದ  ಎಸ್ ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಕೋಮಲ್ ಕುಮಾರ್ ಈವರೆಗೂ ಅಭಿನಯಿಸಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕ  ಹರಿಕೃಷ್ಣ ಎಸ್ ಮಾತನಾಡಿ, ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ “ಕೋಣ” ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ವಿನೋದ್ ಕುಮಾರ್ ಹಾಗೂ ಸೆಲ್ವನ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ , ವಿನೋದ್ ಕುಮಾರ್ ಬಿ ಛಾಯಾಗ್ರಹಣವಿದೆ.