ನಟ ಚೇತನ್​​ಗೆ ಜಾಮೀನು

ಬೆಂಗಳೂರು,ಮಾ.23- ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್​​ಗೆ ಜಾಮೀನು ದೊರೆತಿದೆ.
ಬಂಧಿತರಾಗಿ ಜೈಲಿನಲ್ಲಿದ್ದ ಚೇತನ್ ಗೆ ನಗರದ 32ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. 
ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರು ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಸೂಚನೆ ನೀಡಿದ್ದಾರೆ.
ಹಿಂಧೂ ಧರ್ಮದ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ್ದ ಚೇತನ್ ಅವರನ್ನು ಮಾರ್ಚ್​ 21 ರಂದು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು.
ಬಂಧನ ಆಗುತ್ತಿದ್ದಂತೆ ಚೇತನ್ ಪರ ವಕೀಲರು ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಾಮೀನು ಅರ್ಜಿ ವಿಚಾರಣೆಯನ್ನು ಇವತ್ತಿಗೆ ಮುಂದೂಡಿತ್ತು.