ನಟ ನಿಖಿಲ್ ಗೆ ಪಾಸಿಟಿವ್, ಅನಿತಾಗೆ ಕ್ವಾಂರಟೈನ್

ಬೆಂಗಳೂರು, ಏ.17- ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ನಟ ನಿಖಿಲ್ ಕುಮಾರ ಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ಧೃಢಪಟ್ಟಿದೆ.

ತಂದೆ ಹಾಗು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರಿಗೆ ಬೆಳಗ್ಗೆಯಷ್ಟೇ ಕೊರೋನಾ ದೃಢ ಪಟ್ಟ‌ ಹಿನ್ನೆಲೆಯಲ್ಲಿ ಪುತ್ರ ನಿಖಿಲ್ ಅವರಿಗೆ ಪಾಸಿಟೀವ್ ಬಂದಿದೆ‌

ಶಾಸಕಿ ಅನಿತಾ ಕುಮಾರ್ ಸ್ವಾಮಿ ಅವರಿಗೆ ವೈದ್ಯರ ಮುಂದಿನ ಸಲಹೆ ಮೇರೆಗೆ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ.

ಪರೀಕ್ಷೆಗೆ ಒಳಗಾಗಿ:

ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು‌ ನಟ ನಿಖಿಲ್ ಕುಮಾರ ಸ್ವಾಮಿ ಟ್ವೀಟ್ ಮಾಡಿದ್ದಾರೆ

ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದಿದ್ದಾರೆ.

ಕ್ವಾರಂಟೈನ್ ಗೆ ಸಲಹೆ:

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕೆಂದು ಮನವಿ‌ ಮಾಡಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಮಾಡಿದ್ದಾರೆ‌.

ಎರಡನೇ ಅಲೆಯ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ.ಇದು ಜನ ಸಾಮಾನ್ಯರನ್ನು ಕಂಗೆಡಿಸುವಂತೆ ಮಾಡಿದೆ