ನಟ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ

ಕನಕಪುರ, ಸೆ. ೨೧- ಕನ್ನಡ ಚಿತ್ರರಂಗದ ಮೇರುನಟ ಡಾ.ವಿಷ್ಟುವರ್ಧನ್ ಅವರ ಹುಟ್ಟುಹಬ್ಬದ ಆಚರಣೆಯನ್ನು ವಿಷ್ಣುವರ್ಧನ್ ಅಭಿಮಾನಿಗಳು ಹೌಸಿಂಗ್ ಬೋರ್ಡ್ ಸಮೀಪದ ಹೆದ್ದಾರಿ ಮುಖ್ಯ ರಸ್ತೆಯಲ್ಲಿ ಆಚರಣೆ ಮಾಡಿದರು.
ಅಭಿಮಾನಿಗಳು ವಿಷ್ಣುವರ್ಧನ್ ಭಾವಚಿತ್ರಕ್ಕೆ ದೊಡ್ಡ ಗುಲಾಬಿ ಹಾರವನ್ನು ಹಾಕಿ ದೊಡ್ಡದಾದ ಕೇಕ್‌ನ್ನು ಕತ್ತರಿಸಿ ಎಲ್ಲರಿಗೂ ಕೇಕ್ ಹಂಚಿ ಸಂಭ್ರಮಿಸಿದರು. ಅಭಿಮಾನಿಗಳು ಮಾತನಾಡಿ ಡಾ.ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗ ಕಂಡ ಮೇರುನಟ, ಅವರು ತಮ್ಮ ಅಭಿನಯದ ಮೂಲಕ ಚಿತ್ರರಸಿಕರ ಮನಸ್ಸಿನಲ್ಲಿ ಸ್ಥಾನ ಪಡೆದುಕೊಂಡು ಶಾಶ್ವತವಾಗಿ ನೆಲೆಸಿದ್ದಾರೆ.
ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರು ನಟಿಸಿರುವ ಸಿನಿಮಾಗಳ ಮೂಲಕ ಜೀವಂತವಾಗಿದ್ದಾರೆ ಎಂದರು.