ನಟ ಶಿವರಾಂ ಸ್ಥಿತಿ ಚಿಂತಾಜನಕ

ಬೆಂಗಳೂರು,ಡಿ.೪- ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಕೋಮಾದಲ್ಲಿರುವ ಅವರ ಹೃದಯವು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ವೈದ್ಯ ಡಾಕ್ಟರ್ ಮೋಹನ್ ಅವರು ನಮ್ಮ ಪ್ರಯತ್ನವನ್ನು ನಾವು ಮಾಡಿದ್ದೇವೆ ಇನ್ನು ದೇವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.
ಶಿವರಾಮ್ ಅವರ ಹೃದಯವು ಕೂಡ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿರುವ ಅವರು ಸದ್ಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ಕಾಲುಜಾರಿ ಬಿದ್ದು ತಲೆಗೆ ಏಟು ಬಿದ್ದು ಕೋಮಾ ಸ್ಥಿತಿಗೆ ತಲುಪಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.