
ಬೆಂಗಳೂರು,ನ.೪- ಕನ್ನಡದ ಚಿತ್ರರಂಗದ ಹೆಸರಾಂತ ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿ ಬಂದಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ೪೫ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಟ ಶಿವಣ್ಣ ಭಾಗಿಯಾಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ತಕ್ಷಣ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಂಡು ಮನೆಗೆ ಮರಳಿದ್ದಾರೆ.
ಶಿವಣ್ಣ ಅವರು ಮಳೆಯಲ್ಲಿ ನೆನೆದ ಹಿನ್ನೆಲೆಯ ಹೆಚ್ಚು ಸುಸ್ತಾಗಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಕೊಂಡು ಮನೆಗೆ ಮರಳಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಶಿವರಾಜ್‌ಕುಮಾರ್ ಅವರಿಗೆ ವೈದ್ಯರುನಿನ್ನೆಯೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ತಪಾಸಣೆ ನಂತರ ಆತಂಕ ಪಡುವಂಥದ್ದು ಏನೂ ಆಗಿಲ್ಲ ಎಂದು ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಈ ಹಿಂದೆ ಶಿವಣ್ಣಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಸಹಜವಾಗಿಯೇ ಅಭಿಮಾನಿಗಳಿಗೆ ಆತಂಕ ಮೂಡಿತ್ತು. ಸದ್ಯ ಶಿವಣ್ಣ ಆರಾಮಾಗಿದ್ದರೆ, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತರು ಮಾಹಿತಿ ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ದೈನಂದಿನ ತಪಾಸಣೆಗೆ ಆಸ್ಪತ್ರೆಗೆ ಹೋಗಿದ್ದರು. ಮನೆಯಲ್ಲಿ ಇದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬ ಮೂಲಗಳು ಸ್ಪಷ್ಟಪಡಿಸಿವೆ