ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು.ಜು೮: ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.
.ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜು.೨೧ಕ್ಕೆ ಮಂದೂಡಿದೆ.ಪ್ರಕರಣದ ಹಿನ್ನೆಲೆ ಏನು? ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ೨೦೨೩ರ ಮೇ ೭ರಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.