ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು,ಮೇ.೨೬- ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.
ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯಾಗಿದ್ದಾರೆ.
ಚಂದ್ರಶೇಖರ ಅವರು ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯ ಮೇಲಿಂದ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ತೇಲುತ್ತರಿರುವ ಬಲೂನ್ ನೋಡಿ ಅನುಮಾನಿಸಿದ ಸ್ಥಳೀಯರು ನದಿಗೆ ಹಾರಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದ್ದು, ಹೊರತೆಗೆಯಲಾಗಿದೆ.ಉದ್ಯಮಿ ಚಂದ್ರಶೇಖರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು,ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.
ಆತ್ಮಹತ್ಯೆ ಸಹಾಯವಾಣಿ:
ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – ೯೧೫೨೯೮೭೮೨೧