ನದಿಪಾತ್ರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಹಾವೇರಿ,ಜು17: ಅತಿವೃಷ್ಟಿಯಿಂದ ತುಂಬಿರುವ ವರದಾ ನದಿ ಪಾತ್ರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸವಣೂರ ತಾಲೂಕಿನ ವರದಾನದಿ ಪಾತ್ರದ ಮನ್ನಂಗಿ ಮತ್ತು ಮೆಳ್ಳಾಗಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸ್ಥಿತಿಯನ್ನು ಪರಿಶೀಲನೆ ನಡೆಸಿದರಲ್ಲದೆ ಗ್ರಾಮಸ್ಥರೊಂದಿಗೆ ಮಾತನಾಡಿ ಧೈರ್ಯ ಹೇಳಿದರು.
ಸವಣೂರ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.