
ಕಲಬುರಗಿ,ಮೇ.21-ನದಿಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಅಫಜಲಪುರ ತಾಲ್ಲೂಕಿನ ದೇಸಾಯಿ ಕಲ್ಲೂರ್ ಗ್ರಾಮದ ಬಳಿಯ ಭೀಮಾ ನದಿಯಲ್ಲಿ ನಡೆದಿದೆ.
ದೇಸಾಯಿ ಕಲ್ಲೂರ್ ಗ್ರಾಮದ ಬಾಬು (40) ಎಂಬುವರೆ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.