ನದಿಯಲ್ಲಿ ಮುಳುಗಿ‌ ಇಬ್ಬರು ವಿದ್ಯಾರ್ಥಿಗಳು ಸಾವು

ಚಿಕ್ಕಮಗಳೂರು,ಮೇ.19-ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಶೃಂಗೇರಿಯ ನೆಮ್ಮಾರು ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಹರಿಹರಪುರದ ರಕ್ಷಿತ್ (20) ಹಾಗೂ ಶೃಂಗೇರಿ ಸುಂಕದ ಮಕ್ಕಿಯ ಪ್ರಜ್ವಲ್ ಮೃತ ವಿದ್ಯಾರ್ಥಿಗಳು.
ಈ ಇಬ್ಬರು ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ರಕ್ಷಿತ್​ ನೀರಿನಲ್ಲಿ ಸಿಲುಕಿಕೊಂಡಿದ್ದ. ಆತನ ರಕ್ಷಣೆಗೆಂದು ಪ್ರಜ್ವಲ್​ ತೆರಳಿದಾಗ ದುರ್ಘಟನೆ ಸಂಭವಿಸಿದೆ. ಈ ಇಬ್ಬರು ಶೃಂಗೇರಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಶೃಂಗೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.