ನನಗೆ ಟಿಕೇಟ್ ಖಚಿತ: ಮಾವಿನಹಳ್ಳಿ ಸಿದ್ದೇಗೌಡ

ಮೈಸೂರು: ಏ.02:- ಸಿದ್ದರಾಮಯ್ಯ ಹೇಳಿದ್ದಾರೆ ಚಾಮುಂಡೇಶ್ವರಿ ಕ್ಷೇತ್ರದ ನನಗೆ ಕಾಂಗ್ರೆಸ್ ಪಕ್ಷದಿಂದ ಟಿಕೇಟ್ ಘೋಷಣೆಯಾಗುವುದು ಖಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಾವಿನಹಳ್ಳಿ ಸಿದ್ದೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನ ತಮ್ಮ ನಿವಾಸದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದ 13 ಮಂದಿ ಆಕಾಂಕ್ಷಿಗಳಿಗೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕ ವಿಶ್ವಾಸ ಮೂಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಒಮ್ಮತದ ಅಭ್ಯರ್ಥಿಯಾಗಿದ್ದೇನೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ಬಳಿಕ ಬಿಡುಗಡೆಯಾಗುವ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗುವ ವಿಶ್ವಾಸವಿದೆ. ಕಳೆದ ಎರಡು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕುಂಠಿತ ಇನ್ನಿತರ ವಿಚಾರಗಳನ್ನು ಮುಂದಿಟ್ಟು ಮತ ಯಾಚನೆ ಮಾಡಿ ಪಕ್ಷ ಅಧಿಕಾರಕ್ಕೆ ತರುವುದಾಗಿ ಹೇಳಿದರು.