ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಚಾಲನೆ


ಸಂಜೆವಾಣಿ ವಾರ್ತೆ
ಕೊಟ್ಟೂರು, ಆ.14: ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮಕ್ಕೆ ಹಗರಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನೇಮಿರಾಜ್ ನಾಯ್ಕ್  ಗಿಡಕ್ಕೆ ನೀರೆಯುವ ಮೂಲಕ ಚಾಲನೆ ನೀಡಿದರು.
ಪಟ್ಟಣದ ಪಟ್ಟಣ ಪಂಚಾಯಿತಿ ಆವರಣದಲ್ಲಿ  ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದ ರಕ್ಷಣೆಗೆ ಜೀವನವನ್ನು ಮುಡುಪಾಗಿ ಇಟ್ಟಿರುವಂತಹ ಯೋಧರನ್ನು ಸ್ಮರಿಸುವಂತಹ ಕಾರ್ಯಕ್ರಮವಾಗಿದೆ,
ಪ್ರತಿಯೊಬ್ಬ ಮನುಷ್ಯನು ದೇಶ ಅಭಿಮಾನವನ್ನು ಮೈಗೂಡಿಸಿಗೊಳ್ಳಬೇಕು, ಪ್ರತಿಯೊಬ್ಬರು ದೇಶಕ್ಕಾಗಿ ನನ್ನ ಕೊಡುಗೆ ಏನು ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು. ದೇಶದಲ್ಲಿ ನಾವು ಸುರಕ್ಷತೆಯಿಂದ  ವಾಸಿಸುತ್ತೇವೆ ಎಂದರೆ ಅದು ಯೋಧರ ಕೊಡುಗೆ ಎಂದು ತಿಳಿಸಿದರು.
ನಂತರ ಮಾತನಾಡಿದ ಹರ್ಷವರ್ಧನ್ ನನ್ನ ಮಣ್ಣು ನನ್ನ ದೇಶ ಎಂಬ ಕಾರ್ಯಕ್ರಮವನ್ನು ದೇಶಕ್ಕಾಗಿ ಹೋರಾಡಿದ ಸೈನಿಕರನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಪ್ರತಿಯೊಬ್ಬರು ಸೈನಿಕರನ್ನು ಪ್ರತಿನಿತ್ಯ ಸ್ಮರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ  ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿಯಾದ ನಸುರುಲ್ಲಾ, ಪಟ್ಟಣ ಪಂಚಾಯತಿ ಸದಸ್ಯರಾದ ಬಾವಿಕಟ್ಟೆ ಶಿವಣ್ಣ, ಕೊಟ್ರೇಶ್, ಸಿದ್ದಣ್ಣ, ವೀಣಾ ವಿವೇಕಾನಂದ ಹಾಗೂ ಶಶಿಧರ, ಅಜ್ಜಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ  ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ  ಅಜ್ಜಪ್ಪ ಮತ್ತು  ಮೈದೂರು ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.