ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ

(ಸಂಜೆವಾಣಿ ವಾರ್ತೆ)
ಇಳಕಲ್,ಆ20 : ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಡಿಯಲ್ಲಿ ಇಳಕಲ್ ನಗರಸಭೆ ಮುಂಭಾಗದ ಕಿತ್ತೂರು ರಾಣಿ ಚೆನ್ನಮ್ಮ ಉದ್ಯಾನವನದಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆಎಂ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಇಳಕಲ್ ತಾಲೂಕು ಪ್ರಭಾರಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ್ ನಗರ ಸಭೆ ಆಯುಕ್ತ ಶ್ರೀನಿವಾಸ್ ಜಾಧವ್ ಸೇರಿದಂತೆ ನಗರಸಭೆಯ ಸಿಬ್ಬಂದಿ ವರ್ಗದವರು, ಇಲ್ಕಲ್ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಪ್ರಭಾರಿ ಅಧಿಕಾರಿ ಅನ್ನಪೂರ್ಣ ಕುಬಕಡ್ಡಿ ಉಪಸ್ಥಿತರಿದ್ದರು.