
ಮೈಸೂರು: ಮೇ.04:- ಮೈಸೂರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ 285 ಘನ ತ್ಯಾಜ್ಯ ವಿಲೇವಾರಿ ವಾಹನಗಳಿಂದ ಹಾಗೂ ವಾಹನ ಚಾಲಕರಿಂದ ನನ್ನ ಮತ ನನ್ನ ಹಕ್ಕು ಎಂಬ ವಾಕ್ಯದೊಂದಿಗೆ ಸರಪಳಿ ನಿರ್ಮಿಸಿ ಮೇ.10 ರಂದು ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ಮಹಾನಗರ ಪಾಲಿಕೆ ಅಧಿಕಾರಿಗಳಾದ ಮೃತ್ಯುಂಜಯ, ಮೈತ್ರಿ ಮತ್ತು ಶ್ರೀದೇವಿ ಅವರು ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.