
ಬೀದರ್:ಮಾ.9: ಜಾತ್ಯತೀತ ಜನತಾ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಬಿ ಖುರೇಶಿ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನಬಿ ಖುರೇಶಿ, ಎರಡೂವರೆ ದಶಕದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಒಮ್ಮೆ ನಗರಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೇರಿ ಜೆಡಿಎಸ್‍ನ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ.
ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರಿಗೆ ಮಹತ್ವದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೊಣೆ ನೀಡಲಾಗಿದೆ.
ತಮ್ಮನ್ನು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಕ್ಕೆ ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಶಾಸಕ ಬಂಡೆಪ್ಪ ಕಾಶೆಂಪುರ ಹಾಗೂ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಅವರಿಗೆ ನಬಿ ಖುರೇಶಿ ಕೃತಜ್ಞತೆ ತಿಳಿಸಿದ್ದಾರೆ.