ನಮಸ್ತೆ ಘೋಸ್ಟ್  ಉತ್ತಮ ಪ್ರತಿಕ್ರಿಯೆ

ಹೊಸಬರು ಹೊಸ ಕನಸು ಕಟ್ಟಿಕೊಂಡು ತೆರೆಗೆ ತಂದಿರುವ ಚಿತ್ರ ” ನಮಸ್ತೆ ಘೋಸ್ಟ್” ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕೇಂದ್ರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೇ ಖುಷಿಯಲ್ಲಿ ಇನ್ನಷ್ಟು ಚಿತ್ರಮಂದಿರಗಳಲ್ಲಿ ಚಿತ್ರ  ಎರಡನೇ ವಾರ ಪ್ರದರ್ಶನ ಕಾಣಲು ಸಜ್ಜಾಗಿದೆ.

ಭರತ್ ನಂದ ನಿರ್ದೇಶನ ಮಾಡಿ ನಾಯಕನಾಗಿ ನಟಿಸಿರುವ ಚಿತ್ರ ಇದು, ನಾಯಕಿಯಾಗಿ ವಿದ್ಯಾರಾಜ್ ಕಾಣಿಸಿಕೊಂಡಿದ್ದಾರೆ. ಪ್ರತಿಭಾವಂತರ ದಂಡೇ ಇರುವ ಚಿತ್ರವನ್ನು ಬೆಂಗೂರಿನ ಮಲ್ಟಿಪ್ಲೆಕ್ಸ್ ಮತ್ತು ಶಿವಮೊಗ್ಗದಲ್ಲಿ ಚಿತ್ರ ಬಿಡುಗಡೆಯಾಗಿದ್ದು ಎಲ್ಲಾ ಕಡೆ ಉತ್ತಮ ಪ್ರದರ್ಶನ ಕಂಡಿದೆ. 

ಈ ಕುರಿತು ಮಾಹಿತಿ ಹಂಚಿಕೊಂಡ ನಿರ್ದೇಶಕ, ನಟ ಭರತ್ ನಂದಾ, ಹಾರರ್ ಸಸ್ಪೆನ್ಸ್, ಕಾಮಿಡಿ ಅಂಶಗಳಿರುವ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಮೂಡಿ ಬಂದಿದೆ.ವಿದ್ಯಾರ್ಥಿಗಳು ಸೇರಿದಂತೆ ಗಣ್ಯರಿಗೆ ಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಎಲ್ಲೆಡೆ ಉತ್ತಮ ಪ್ರಶಂಸೆ ವ್ಯಕ್ತವಾಯಿತು.; ಇದೇ ಖುಷಿಯಲ್ಲಿ ಚಿತ್ರವನ್ನು ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿದ್ದು ಎಲ್ಲಾ ಕಡೆ ಜನರಿಗೆ ಒಳ್ಳೆಯ ಮಾತು ಕೇಳಿಬಂದಿದೆ. ಹೊಸ ತಂಡಕ್ಕೆ ಜನರಿಂದ ಸಿಗುತ್ತಿರುವ ಪ್ರೀತಿಗೆ ಚಿರಋಣಿಯಾಗಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬಿಡುಗಡೆಯಾದ ಮಲ್ಟಿಪ್ಲೆಕ್ಸ್‍ಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇನ್ನಷ್ಟು ಮಂದಿ ಚಿತ್ರಕ್ಕೆ ಸಹಕಾರ ನೀಡಿದರೆ ಹೊಸಬರು ಚಿತ್ರರಂಗದಲ್ಲಿ ಗುರುತಿಸಿಕೊಳ್ಳಲು ಸಹಕಾರಿಯಾಗಲಿದೆ.ಚಿತ್ರಕ್ಕೆ ರಮೇಶ್ ಕುಮಾರ್ ಬಂಡವಾಳ ಹಾಕಿದ್ದು ಯಧುನಂದನ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.