ನಮೋಶಿಗೆ ಪರಿಷತ್ ಪ್ರತಿಪಕ್ಷದ ನಾಯಕ ಮಾಡಿ

(ಸಂಜೆವಾರ್ಣಿ ವಾರ್ತೆ)
ಕಾಳಗಿ.ಜೂ.5. ಕಲ್ಯಾಣ ಕರ್ನಾಟಕಕ್ಕೆ ಇದುವರೆಗೂ ಪ್ರತಿಪಕ್ಷದ ನಾಯಕ ಸೇರಿದಂತೆ ಹಲವು ಸ್ಥಾನಗಳು ನೀಡಿಲ್ಲ. ಆದ್ದರಿಂದ ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯನಾಗಿರುವ ಹಿರಿಯ ಎಂಎಲ್ಸಿ ಶಶೀಲ್ ನಮೋಶಿ ಅವರಿಗೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಲ್ಲಿನಾಥ ಪಾಟೀಲ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದವರು ಕಲ್ಯಾಣ ಕರ್ನಾಟಕಕ್ಕೆ ಇಲ್ಲಿಯವರೆಗೂ ಸಭಾಪತಿ ಉಪ -ಸಭಾಪತಿ, ವಿರೋಧ ಪಕ್ಷದ ನಾಯಕ, ಸರಕಾರಿ ಮುಖ್ಯ ಸಚೇತಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಸಚೇತಕ ಹುದ್ದೆಯನ್ನಾಗಲಿ ಯಾರೋಬ್ಬರಿಗೂ ನೀಡಿರುವುದಿಲ್ಲ. ಹೀಗಾಗಿ ಈ ಬಾರಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಬೇಕೆಂದು ವಿನಂತಿಸಿದರು.