ನಮೋಶಿಯವರಿಗೆ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಲು ಆಗ್ರಹ

ಭಾಲ್ಕಿ :ಜು.6: ನಾಲ್ಕು ಬಾರಿ ಈಶಾನ್ಯ ಶಿಕ್ಷಕರ ಮತದಾರರ ಕ್ಷೇತ್ರದಿಂದ ಆಯ್ಕೆಯಾದ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾದ ಶಶೀಲ.ಜಿ.ನಮೋಶಿಯವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡುವಂತೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ಗಣಪತಿ ಬೋಚರೆ ಪಕ್ಷದ ಮುಖಂಡರಿಗೆ ಆಗ್ರಹಿಸಿದ್ದಾರೆ.

ಸರಳ ಸಜ್ಜನಿಕೆಗೆ ಹೆಸರಾದ ಶಶೀಲ ನಮೋಶಿಯವರು ಒಬ್ಬ ಅನುಭವಿ ರಾಜಕಾರಣಿಯಾಗಿದ್ದು ಕಲ್ಯಾಣ ಕರ್ನಾಟಕ ಭಾಗದ ಧೀಮಂತ ನಾಯಕರಾಗಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗುವ ಎಲ್ಲಾ ಲಕ್ಷಣಗಳು ಅವರಲ್ಲಿದ್ದ ಕಾರಣ ಭಾರತೀಯ ಜನತಾ ಪಕ್ಷದ ರಾಷ್ಟ್ರ ಹಾಗೂ ರಾಜ್ಯದ ನಾಯಕರುಗಳು ನಮೋಶಿಯವರನ್ನು ವಿಧಾನ ಪರಿಷತ್ತಿಗೆ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕೆಂದು ಬೋಚರೆಯವರು ಮನವಿ ಮಾಡಿದ್ದಾರೆ.