ನಮ್ಮ ಗ್ರಾಮ ಸ್ವಚ್ಛ ಗ್ರಾಮ ಅಭಿಯಾನಕ್ಕೆ ಚಾಲನೆ


ಸಂಜೆವಾಣಿ ವಾರ್ತೆ
ಕೊಟ್ಟೂರು, ಜ.14:  ತಾಲೂಕು ಪಂಚಾಯಿತಿ ವ್ಯಾಪ್ತಿಯ  ವಿವಿಧ ಗ್ರಾಮಗಳಲ್ಲಿ “ನಮ್ಮ ಗ್ರಾಮ ಸ್ವಚ್ಛ ಗ್ರಾಮ”  ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ರಾಂಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂಕದಕಲ್ಲು ಗ್ರಾಮದಲ್ಲಿ ಚರಂಡಿಗಳನ್ನು ಸ್ವಚ್ಛತೆಗೊಳಿಸುವುದುರ  ಮೂಲಕ ಕಾರ್ಯಕ್ರಮಕ್ಕೆ ಸ್ಥಳೀಯ ಗ್ರಾಮ ಪಂಚಾಯತಿ ಆಡಳಿತದಿಂದ  ಚಾಲನೆ ನೀಡಿದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಆದೇಶದಂತೆ  ದಿ.13 ರಿಂದ ತಿಂಗಳ ಕೊನೆಯವರೆಗೂ ಪ್ರತಿ ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆ, ಪೈಪ್ ಗಳ ದುರಸ್ತಿ  ಕಾರ್ಯ, ತಿಪ್ಪೆಗಳ ತೆರವು, ಹಾಗೂ ಅಂಗನವಾಡಿ ಮತ್ತು ಆಸ್ಪತ್ರೆಗಳ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿ ಆರೋಗ್ಯದ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಪಿಡಿಒ ಉಮಾಪತಿ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು
 ಬಾಕ್ಸ್ ಸುದ್ದಿ
 ಸರ್ಕಾರದ ಆಶಯದಂತೆ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ ಹಳ್ಳಿಗಳಲ್ಲಿ ನಮ್ಮ ನಡೆ ಸ್ವಚ್ಛತೆ ಕಡೆ ಅಭಿಯಾನದಿಂದ ಸಾರ್ವಜನಿಕ ಆರೋಗ್ಯ ಕಾಪಾಡುವುದು, ಮತ್ತು ಉತ್ತಮ ವಾತಾವರಣ ನಿರ್ಮಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ
 ಪರಮೇಶಪ್ಪ.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೊಟ್ಟೂರು