ನಮ್ಮ ನಡೆ, ತ್ಯಾಜ್ಯ ಮುಕ್ತ ಕಡೆ ಅಭಿಯಾನ

ಗಂಗಾವತಿ ಏ 03: ತಾಲೂಕಿನ ಡಣಾಪುರ ಗ್ರಾಮದಲ್ಲಿ ನಮ್ಮ ನಡೆ, ತ್ಯಾಜ್ಯ ಮುಕ್ತ ಕಡೆ ಅಭಿಯಾನ ಹಾಗೂ ಸ್ವಚ್ಛ ಶುಕ್ರವಾರ ಅಂಗವಾಗಿ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಡಿ. ಮೋಹನ್ ಅವರು ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿದರೆ ರೋಗ ರುಜಿನದಿಂದ ದೂರ ಇರಬಹುದು. ಪ್ರತಿಯೊಬ್ಬರೂ ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಬೇಕು. ಮನೆ ಸುತ್ತಲಿನ ಜಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ನಂತರ ಗ್ರಾಮದ ಶಾಲಾ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಗಿಡಗಳಿಗೆ ನೀರು ನಿಲ್ಲಲು ವ್ಯವಸ್ಥೆ ಮಾಡಲು ಶ್ರಮದಾನ ಮಾಡಲಾಯಿತು.
ತದನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಪಂ ಪಿಡಿಒ, ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಹಾಗೂ ಯುವಕರ ತಂಡದವರು ಸ್ವಚ್ಛತಾ ಕಾರ್ಯ ಮಾಡುತ್ತಾ
ಜಾಗೃತಿ ಜಾಥಾ ನಡೆಸಿ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.