ನಮ್ಮ ನಡೆ-ಮತಗಟ್ಟೆ ಕಡೆ ಅಭಿಯಾನ:ಜಿಲ್ಲೆಯ ಎಲ್ಲಾ ಮತಗಟ್ಟೆಯಲ್ಲಿ ಏ. 28 ರಂದು ಚುನಾವಣಾ ಧ್ವಜಾರೋಹಣ:ಭಂವರ್ ಸಿಂಗ್ ಮೀನಾ

ಕಲಬುರಗಿ,ಏ.27:ಲೋಕಸಭಾ ಚುನಾವಣೆ ಸಂಬಂಧ ಮತದಾರರಲ್ಲಿ ಜಾಗೃತಿ ಮೂಡಿಸಲು “ನಮ್ಮ ನಡೆ ಮತಗಟ್ಟೆಯ ಕಡೆ” ಅಭಿಯಾನದ ಅಂಗವಾಗಿ ಏ.28 ರಂದು ಕಲಬುರಗಿ ಜಿಲ್ಲೆಯ ಎಲ್ಲಾ 2,378 ಮತಗಟ್ಟೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಚುನಾವಣಾ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ರವಿವಾರ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಟ ಮೂಲಭೂತ ಸೌಲಭ್ಯಗಳು (Assured Minimum Facilities-AMF) ಇರುವ ಕುರಿತು ಖಚಿತಪಡಿಸಿಕೊಂಡು ಚುನಾವಣಾ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾರ್ಯಕ್ರಮ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ಮತದಾರರಿಗೆ ಮತಗಟ್ಟೆ ವಿಳಾಸ ತಿಳಿಸುವುದು ಮತ್ತು ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡುವುದಕ್ಕೆ ಪ್ರೇರೇಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಂದಿಲ್ಲಿ ಧ್ವಜಾರೋಹಣ ಮಾಡಲಾಗುವ ಧ್ವಜವು ಮತದಾನ ನಡೆಯೋವರೆಗೂ ಮತಗಟ್ಟೆಯಲ್ಲಿ ಹಾರಾಡಲಿದೆ. ಮತಗಟ್ಟೆಯ ಗುರುತಾಗಿ ಇದು ಬಿಂಬಿತವಾಗಲಿದೆ ಎಂದರು.

ಸೈಕಲ್ ರ್ಯಾಲಿ: ನಮ್ಮ ನಡೆ-ಮತಗಟ್ಟೆ ಕಡೆ ಅಭಿಯಾನ ಅಂಗವಾಗಿ ಏ.28 ರಂದು ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಸೈಕಲ್ ರ್ಯಾಲಿಗೆ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ನಗರ ಪೆÇಲೀಸ್ ಆಯುಕ್ತ ಆರ್.ಚೇತನ ಕುಮಾರ ಅವರು ಚಾಲನೆ ನೀಡಲಿದ್ದಾರೆ. ಸೈಕಲ್ ರ್ಯಾಲಿ ಜಗತ್ ವೃತ್ತದಿಂದ ಗಂಜ್ ಪ್ರದೇಶದ ನಗರೇಶ್ವರ ಶಾಲೆ ವರೆಗೆ ಜರುಗಲಿದೆ.