
ರೋಣ,ಮೇ.2: : ವಿಧಾನಸಭಾ ಚುನಾವಣೆ 2023 ರ ಅಂಗವಾಗಿ ರೋಣ ಪಟ್ಟಣದ ಸೂಡಿ ಕ್ರಾಸ್ ನಿಂದ ಪೆÇೀತರಾಜನ ಕಟ್ಟೆ ಕಡೆಗೆ ಮತದಾನ ಜಾಗೃತಿ ಜಾಥಾ ನಡೆಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮುಂಭಾಗದಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರವಿ ಎ.ಎನ್ ಸಮ್ಮುಖದಲ್ಲಿ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದ ಧ್ವಜರೋಹಣವನ್ನು ರೋಣ ವಿಧಾನಸಭಾ ಚುನಾವಣಾ ಅಧಿಕಾರಿ ಪ್ರಶಾಂತ ವರಗಪ್ಪನವರ ನೇರವೇರಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತಾಲೂಕ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್, ಎಲ್ಲಾ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ 10 ರಂದು ನಡೆಯುವ ಮತದಾನದ ದಿನ ತಪ್ಪದೆ ನಿಮ್ಮ ಹಕ್ಕು ಚಲಾಯಿಸಿ ಎಂದರು. ಅಲ್ಲದೇ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ದೂರುಗಳನ್ನು ನೀಡಬೇಕು ಹಾಗೂ ಸುಲಲಿತ ಹಾಗೂ ನ್ಯಾಯಬದ್ಧ ಚುನಾವಣೆಗಾಗಿ ಚುನಾವಣಾ ಆಯೋಗ ನೀಡಿರುವ ಓಟರ್ ಹೆಲ್ಪ್ ಲೈನ್, ಸಕ್ಷಾಮ್ ಆ?ಯಪ್, ಸಿವಿಜಿಲ್ ಆ?ಯಪ್ ಗಳನ್ನು ಬಳಸಿ ನೈತಿಕ ಮತದಾನಕ್ಕೆ ಸಹಕರಿಸಬೇಕು ಎಂದರು.
ಮೇ 10 ರಂದು ಕರ್ನಾಟಕ ವಿಧಾನ ಸಭೆಗೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಗೆ ಪ್ರಭಾವಿತರಾಗದೇ ವಿವೇಚನೆಯಿಂದ ಮತ ಚಲಾಯಿಸಿ ಎಂದರು. ಆ ಮುಖಾಂತರ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಕಡ್ಡಾಯವಾಗಿ ಮತದಾನ ಮಾಡಿ ಎಂದರು. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತದಾನ ಜಾಗೃತಿ ಜಾಥಾದಂತಹ ಅನೇಕ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲರೂ ಕಡ್ಡಾಯವಾಗಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದರು.
ಈ ಸಂದರ್ಭದಲ್ಲಿ ರೋಣ ವಿಧಾನಸಭಾ ಚುನಾವಣಾ ಅಧಿಕಾರಿ ಪ್ರಶಾಂತ ವರಗಪ್ಪನವರ ಮತದಾನ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮುಂಬಾಗದಲ್ಲಿ ಪ್ರತಿಜ್ಞಾ ವಿಧಿಯನ್ನು ಸಾರ್ವಜನಿಕರಿಗೆ ಬೋಧಿಸಿ ಧ್ವಜಾರೋಹಣ ನೇರವರಿಸಿ ಕಡ್ಡಾಯ ಮತದಾನದ ಅರಿವನ್ನು ಮೂಡಿಸಿದರು
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ತಾಲೂಕು ಪಂಚಾಯತ ಸಿಬ್ಬಂದಿಗಳು, ಶಿಶು ಅಭಿವೃದ್ಧಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ತಾಲೂಕಿನ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.
ಕಾಲ್ನಡಿಗೆ ಜಾಥಾ : ರೋಣ ತಾಲೂಕಿನ 24 ಗ್ರಾಮ ಪಂಚಾಯತಿಗಳಲ್ಲಿ ಮತದಾನ ಜಾಗೃತಿ ಕುರಿತ ಹಾಗೂ ನಮ್ಮ ನಡೆ ಮತಗಟ್ಟೆ ಕಡೆ ನಾಮಫಲಕಗಳನ್ನು ಹಿಡಿದು ಮತದಾನ ಜಾಗೃತಿ ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.