ನರೇಂದ್ರಸ್ವಾಮಿಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ

ಮಳವಳ್ಳಿ: ಮೇ.28:- ಶಾಸಕ ಪಿ.ಎಂ. ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಬೇಸತ್ತ ಅವರ ಅಭಿಮಾನಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸಚಿವ ಸ್ಥಾನಕ್ಕೆ ಒತ್ತಾಯಿಸಿದರು
ಪಟ್ಟಣದ ಪ್ರಮುಖ ವೃತ್ತದಲ್ಲಿ ಜಮಾಯಿಸಿದ ಬೆಂಬಲಿಗರು ಶಾಸಕರ ಭಾವಚಿತ್ರ ಹಿಡಿದು ಜೈಕಾರ ಕೂಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರೇ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‍ರವರೇ ನರೇಂದ್ರ ಸ್ವಾಮಿಗೆ ಮಂತ್ರಿಗಿರಿ ಕೊಡಿ ಎಂದು ಘೋಷಣೆ ಕೂಗಿದರು.
ನರೇಂದ್ರಸ್ವಾಮಿರನ್ನ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿರುವುದು ಸರಿಯಲ್ಲ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಸಾಕಷ್ಟು ಕ್ರಮವಹಿಸಿದ್ದಾರೆ, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.
ಪರಿಶಿಷ್ಟ ಸಮುದಾಯದ ನರೇಂದ್ರಸ್ವಾಮಿರನ್ನ ಸಚಿವ ಸ್ಥಾನದಿಂದ ವಂಚಿತ ಮಾಡಿರುವುದು ಸಾಮಾಜಿಕ ನ್ಯಾಯಕ್ಕೆ ಮಾಡಿದ ದ್ರೋಹ ಎಂದು ಕಿಡಿಕಾರಿದರು.
ಪುರಸಭಾ ಮಾಜಿ ಅಧ್ಯಕ್ಷ ದೊಡ್ಡಯ್ಯ ನೇತೃತ್ವ ವಹಿಸಿದ್ದರು.
ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ರಾಜಶೇಖರ್, ಶಿವಸ್ವಾಮಿ, ಪ್ರಮೀಳಾ ಮುಖಂಡರಾದ ಕಿರಣ್ ಶಂಕರ್, ಜಯರಾಜು, ಗಂಗರಾಜ ಅರಸ್, ರವಿ, ಪ್ರಸನ್ನ ಸೇರಿದಂತೆ ಇತರರು ಇದ್ದರು.