ನರೇಂದ್ರ ಕಾಲೇಜು: ಡಾ. ಅಂಬೇಡ್ಕರ್ ಜಯಂತಿ ಆಚರಣೆ

ಬೀದರ್:ಎ.16: ಶಾಂತಿಕಿರಣ ಚಾರಿಟಬಲ್ ಟ್ರಸ್ಟ್ ಸಂಚಾಲಿತ ನಗರದ ಸ್ವಾಮಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಕಾಲೇಜು ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸಿದರು. ಅಂಬೇಡ್ಕರ್ ಅವರು ಬಡತನದಲ್ಲೇ ಇಡೀ ವಿಶ್ವ ಬೆರಗುಗೊಳ್ಳುವಂತಹ ಸಾಧನೆ ಮಾಡಿದ್ದರು. ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಆಡಳಿತಾಧಿಕಾರಿ ಕಲ್ಪನಾ ಮಠಪತಿ, ಪ್ರಾಚಾರ್ಯೆ ಮಂಗಲಾ ಎನ್.ಎಂ, ಉಪನ್ಯಾಸಕರು ಇದ್ದರು.