ನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣೆ

ಹುಮನಾಬಾದ :ಜೂ.8: ಕೂಲಿ ಕಾರ್ಮಿಕರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಎದುರಾಗಬಾರದು ಎಂಬ ಉದ್ದೇಶದಿಂದ ನರೇಗಾ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಇಓ ದೀಪಿಕಾ ಬಿ ನಾಯ್ಕರ ತಿಳಿಸಿದರು.
ತಾಲೂಕಿ ಘಾಟಭೋರಳ ಗ್ರಾಮದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯೋಗದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡು ಮಾತನಾಡಿದ ಅವರು, ಗ್ರಾಮೀಣ ಭಾಗದ ನೊಂದಾಯಿತ ಪ್ರತಿಯೊಂದು ಕುಟುಂಬಕ್ಕೆ ಕನಿಷ್ಠ 100 ದಿನ ಕೆಲಸ ನೀಡುವ ಜೊತೆಗೆ ಕೂಲಿ ಕಾರ್ಮಿಕರ ಆರೋಗ್ಯ ಹಿತದೃಷ್ಟಿಯಿಂದ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡು ಕೂಲಿ ಕಾರ್ಮಿಕರ ಬಿಪಿ, ಶುಗರ್ ಇನ್ನಿತರ ಆರೋಗ್ಯ ತಪಾಸಣೆ ನಡೆಸಿ ಸೂಕ್ತವಾದ ಚಿಕಿತ್ಸೆ ನೀಡಲಾಗುವುದು ಹಾಗಾಗಿ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಕುಮಾರ್ ಬುಳ್ಳಾ, ಐಇಸಿ ಸಂಯೋಜಕ ಉಮೇಶ ಮಲಗಿ, ಕೆಎಚಪಿಟಿ ತಾಲೂಕ ಸಂಯೋಜಕರು ಶಿವಕುಮಾರ, ಗ್ರಾಮ ಪಂಚಾಯತ್ ಸಿಬ್ಬಂದಿ ಓಂಕಾರ್,
ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಲಕ್ಷ್ಮಿ ಮೇತ್ರಿ,
ಸಮುದಾಯ ಆರೋಗ್ಯ ಅಧಿಕಾರಿ ಖಾಜಾ ಮೈನುದ್ದಿನ್ ಉಪಸ್ಥಿತರಿದ್ದರು.