ನರೇಗಾ ಕಾರ್ಮಿಕರ ಆರೋಗ್ಯ ತಪಾಸಣೆ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಮೇ.25: ತಾಲೂಕಿನ ಕೆ.ಅಯ್ಯನಹಳ್ಳಿ ಗ್ರಾಮದಲ್ಲಿ ಗ್ರಾ.ಪಂ. ಅಮೃತ ಆರೋಗ್ಯ ಅಭಿಯಾನ ಅಂಗವಾಗಿ ನರೇಗಾ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 105 ಜನ ಪುರುಷರು, 168 ಮಹಿಳೆಯರು ಸೇರಿದಂತೆ 273 ಜನ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ, 26 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು.
ನರೇಗಾ ಸಹಾಯಕ ನಿರ್ದೇಶಕ ಯು.ಹೆಚ್.ಸೋಮಶೇಖರ ಮಾತನಾಡಿ, ಗ್ರಾಮೀಣ ಜನರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಈ ಅಭಿಯಾನ ಹಮ್ಮಿಕೊಂಡಿದೆ. ಸೋಂಕು ರಹಿತ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಅಮೃತ ಯೋಜನೆ ಸಹಕಾರಿಯಾಗಿದೆ. ಗ್ರಾಮೀಣರು ಉತ್ತಮ ಜೀವನಶೈಲಿ ಅಳವಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಪಿಡಿಒ ಮಹ್ಮದ್ ರಫಿ, ನರೇಗಾ ತಾಂತ್ರಿಕ ಸಿಬ್ಬಂದಿ ರವಿಕುಮಾರ್ ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.

One attachment • Scanned by Gmail