ಸಂಜೆವಾಣಿ ವಾರ್ತೆ
ಹೊಸಪೇಟೆ 27: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಜಯನಗರ ಹಾಗೂ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಈ ಬಾರಿ ಅಧಿಕ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆ ಕೈಗೊಳ್ಳಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಂಡಿದೆ. ವಿಜಯನಗರ ಹಾಗೂ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಳ್ಳಲಾಗುತ್ತಿರುವ ನರೇಗಾ ಕಾಮಗಾರಿ ಸ್ಥಳಗಳಿಗೆ ಸ್ವೀಪ್ ಸಮಿತಿ ಭೇಟಿ ನೀಡಿ ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಬಿ.ಸದಾಶಿವ ಪ್ರಭು ಅವರು ಚಿಲಕನಹಟ್ಟಿ ಗಾಮ ಪಂಚಾಯಿತಿಯಿಂದ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಬಿ. ಸದಾಶಿವ ಪ್ರಭು ಅವರು ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು. ಕೂಲಿಕಾರರಿಗೆ ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಗಾದಿಗನೂರು ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಲಾಯಿತು. ನರೇಗಾ ಕೂಲಿಕಾರರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ರಮೇಶ್ ಜಿ.ವಿ., ತಾಂತ್ರಿಕ ಸಂಯೋಜಕ ವೀರೇಶ್ ಹೆಚ್,ಐಇಸಿ ಸಂಯೋಜಕ ಹೆಚ್.ನಾಗರಾಜ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ, ಬೀರಪ್ಪ ಇತರರು ಪಾಲ್ಗೊಂಡಿದ್ದರು.