ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ತರಬೇತಿ

ಕಲಬುರಗಿ:ಮೇ.20: ಕಮಲಾಪುರ್ ತಾಲೂಕ್ ಪಂಚಾಯಿತಿಯ ಕಾರ್ಯಾಲಯದಲ್ಲಿ ಮತ್ತು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯ ಕಾರ್ಯಾಲಯದಲ್ಲಿ ಆರೋಗ್ಯ ಅಮೃತ ಅಭಿಯಾನ ದಡಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡುವ ಕುರಿತು ತರಬೇತಿ ನೀಡಲಾಯಿತು.
ತಾಲೂಕ ಪಂಚಾಯತಿಯ ಕಾರ್ಯಾಲಯದಲ್ಲಿ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಅಂಬರೀಶ್ ಪಾಟೀಲ ಸರ ಮತ್ತು ತಾಲೂಕಿನ ಉದ್ಯೋಗ ಖಾತ್ರಿಯ ಪ್ರಭಾರಿ ಸಹಾಯಕ ನಿರ್ದೇಶಕರಾದ ಜಗನ್ನಾಥ್ ರೆಡ್ಡಿ ಸರ್ ನೇತೃತ್ವದಲ್ಲಿ ತಾಲೂಕ ಪಂಚಾಯತಿಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು ಅವರವರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ತರಬೇತಿಯಲ್ಲಿ ಹಾಜರಿದ್ದರು .