ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜೂ.20: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯಿತಿ ಹೆಚ್ ಹೊಸಳ್ಳಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು.
ತಾಲ್ಲೂಕಿನ ಹೆಚ್.ಹೊಸಳ್ಳಿ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ಕಾಯಿಲೆ ಮತ್ತು ತಂಬಾಕಿನಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಯಿತು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಮೂರ್ತಿ ರವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ 40ವರ್ಷ ದಾಟಿದ ಪ್ರತಿಯೊಬ್ಬರು ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಇಲಾಖೆ ಅಧಿಕಾರಿಗಳಾದ ವೆಂಕಪ್ಪ, ಕೆ.ಎಚ್.ಪಿ.ಟಿ ಮೇಲ್ವಿಚಾರಕರಾದ ವೀರೇಶ್ ಮತ್ತು ಪಂಚಾಯತಿಯ ಸಿಬ್ಬಂದಿ ಸಹಕಾರ ನೀಡಿದರು. ಸಂತೋಷ್, ಉರ್ಕುಂದಪ್ಪ, ವಾಹಿದಾ ಬೇಗಂ, ಆಶಾ ಫೆಸಿಲಿಟೆಟರ್, ಅನಂತ ಲಕ್ಷ್ಳೀ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಹಿರಿಯರು ಮತ್ತು ಮಹಿಳೆಯರು ಇದ್ದರು.