ನರೇಗಾ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ

ಸೇಡಂ,ಎ,25: ತಾಲೂಕಿನ ಕೋಲಕುಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೃತ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ (ಕರ್ನಾಟಕ ವಿಧಾನಸಭೆ ಚುನಾವಣೆ-2023) ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ ಮತ್ತು ತಾಲೂಕಾ ಸ್ವೀಪ್ ಸಮಿತಿಯಿಂದ ಇಂದು ಮಹಿಳಾ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಮತದಾನ ಮಾಡಲು ಸ್ವೀಪ್ ಸಮಿತಿಯಿಂದ ತಿಳಿಸಲಾಯಿತು. ಇದರ ಜೊತೆಗೆ ಪ್ರತಿಜ್ಞಾ ವಿಧಿ ಒದಲಾಯಿತು.
ಈ ವೇಳೆಯಲ್ಲಿ ಸ್ವೀಪ್ ಸಮಿತಿ ಜಿಲ್ಲಾ ಮತ್ತು ತಾಲೂಕ ಅಧಿಕಾರಿಗಳು ಇಲಾಖೆಯ ಸಹಾಯಕ ನಿರ್ದೇಶಕರು ಸಿಬ್ಬಂದಿ ವರ್ಗದವರು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.