ನರೇಗಾ ಕೆಲಸ ಕೇಳಿದ 15 ದಿನದೊಳಗೆ ಕೆಲಸ ನೀಡಿ :ತಾ.ಪಂ ಇಒ ಕಿರಣ್ ಪಾಟೀಲ್

ಹುಮನಾಬಾದ :ಜ.7: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವ ಮೂಲಕ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು ಎಂದು ತಾ.ಪಂ ಇಒ ಕಿರಣ್ ಪಾಟೀಲ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ವಿವಿಧ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿ,
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮಗಳಲ್ಲಿ, ಕಾಮಗಾರಿಗಳನ್ನು ಅನುಷ್ಟಾನ ಮಾಡುವ ಮುಖಾಂತರ ಯೋಜನೆಯ ಲಾಭ ಗ್ರಾಮಸ್ಥರು ಪಡೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು.
ತಾಲೂಕಿನ ಯಾವುದೇ ಗ್ರಾಮ ಪಂಚಾಯಿತಿಲ್ಲಿ ನರೇಗಾ ಯೋಜನೆಯಡಿ ಕೆಲಸ ಕೇಳಿದ 15 ದಿನದೊಳಗೆ ಕೆಲಸ ನೀಡಲು ಅಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಲಶಕ್ತಿ ಅಭಿಯಾನದಡಿಯಲ್ಲಿ ಚಕ್ ಡ್ಯಾಮ್, ನಾಲಾ, ಗೋಕಟ್ಟೆ, ಕೆರೆ,ಅಭಿವೃದ್ಧಿ ಸೇರಿ ಹಲವು ಕಾಮಗಾರಿಗಳು
ರೈತರಿಗೆ ಸಹಕಾರಿಯಾಗಲಿದೆ ಮತ್ತು ಕಸಮುಕ್ತ ಗ್ರಾಮಗಳನ್ನು ನಿರ್ಮಾಣ ಮಾಡುವ ಸಲುವಾಗಿ ಘನ ಮತ್ತು ತ್ಯಾಜ್ಯ ಸಂಸ್ಕರಣ ಘಟಕವನ್ನು ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿರ್ದೇಶನ ನೀಡಿದರು.
ನರೇಗಾ ತಂತ್ರಾಂಶದಲ್ಲಿ ಜಾಬ್ ಕಾರ್ಡ್ ಒಂದಿಗೆ ಆಧಾರ್ ಜೋಡಣೆ ಮತ್ತು ಮೇಟಿಗಳ ನೊಂದಾಣಿ ಮಾಡಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶ ಅಭಿವೃದ್ಧಿ ಹೊಂದಲು ಸರಕಾರ ವಿವಿಧ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು,ಯಾವುದೇ ಯೋಜನೆ ಅನುಷ್ಠಾನ ಮಾಡುವಾಗ, ಗ್ರಾಮ ಪ್ರಗತಿಯಾಗುವ ದೂರದೃಷ್ಟಿಯಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಯೋಜನೆ ತಯಾರಿಸಿ, ಸಮರ್ಪಕವಾಗಿ ದಕ್ಷತೆಯಿಂದ ಕೆಲಸ ಮಾಡಿದಾಗ ಅಭಿವೃದ್ಧಿಯಾಗಿ ನಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತೃಪ್ತಿ ಸಿಗುತ್ತದೆ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರುಗಳಾದ (ಉ ಖಾ )ರಾಜಶೇಖರ್ ಬುಳ್ಳ, (ಪಂ. ರಾ )ಶಿವಲೀಲಾ, ತಾಲೂಕಾ ಪಂಚಾಯತ್ ಅಧಿಕಾರಿಗಳಾದ ದಯಾನಂದ್ ಲಾಖೆ, ಪೂರ್ಣಿಮಾ, ಪಾರ್ವತಿ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕಾ ನರೇಗಾ ಯೋಜನೆ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು,ತಾಂತ್ರಿಕ ಸಹಾಯಕರು,ಬಿ ಎಫ್ ಟಿ ಹಾಜರಿದ್ದರು.