ನರೇಗಾ ಯೋಜನೆಯಡಿಯ ಕೂಲಿಕಾರ್ಮಿಕರಿಗೆಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ವಿಶೇಷ ನೋಂದಣಿ ಅಭಿಯಾನ

ಕಲಬುರಗಿ:ಡಿ.01:ಕಲಬುರಗಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕಲಬುರಗಿ ತಾಲೂಕಿನ ತಾಜ್‍ಸುಲ್ತಾನಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸೈಯದ್ ಚಿಂಚೋಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಾಗಾರಿ ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿರುವ 600 ಕೂಲಿ ಕಾರ್ಮಿಕರಿಗೆ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಹಿನ್ನೆಲೆಯಲ್ಲಿ ಶುಕ್ರವಾರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಕುರಿತು ಮಹಿಳೆಯರಿಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

    ಕಲಬುರಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಈಗಾಗಲೇ ಬರಗಾಲ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ  ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗುತ್ತಿದೆ.  
    ಕಲಬುರಗಿ  ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್, ಸಹಾಯಕ ನಿರ್ದೇಶಕರು (ಗ್ರಾ.ಉ) ರೇವಣಸಿದ್ದಪ್ಪ ಗೌಡರ್, ಸಹಾಯಕ ನಿರ್ದೇಶಕರು (ಪಂ.ರಾ) ವಿಶ್ವನಾಥ, ಗ್ರಾಮ ಪಂಚಾಯತ ಅಧ್ಯಕ್ಷೆ ಸಾಜೀದಾ ಬೇಗಂ, ಉಪಾಧ್ಯಕ್ಷ ಸಂಜಿವಕುಮಾರ ಜಾವುಳಕರ್, ಗ್ರಾಮದ ಸದಸ್ಯರು  ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿ ಅನುಪಮಾ, ಸಿಬ್ಬಂದಿ ವರ್ಗದವರು ಹಾಗೂ ನರೇಗಾ ಐಇಸಿ ಸಂಯೋಜಕ ಮೋಸಿನ್ ಖಾನ್  ಅವರು ಉಪಸ್ಥಿತರಿದ್ದರು.