
ಔರಾದ : ಮೇ.26: ತಾಲ್ಲೂಕಿನ ಚಾಂದೋರಿ ಗ್ರಾಮ ಪಂಚಾಯತ ಹಾಗೂ ರಿಲಯನ್ಸ್ ಫೌಂಡೆಶನ್ ಬೀದರ,ಔಟರಿಚ ಸಂಸ್ಥೆ ಬೀದರ ಇವರ ಸಯೋಗದಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೇಲಸದ ಬಗ್ಗೆ ಮಾಹಿತಿ ನೀಡಲಾಯಿತು, ಗ್ರಾಮೀಣ ಭಾಗದ ಜನರು ವಲಸೆ ಹೋಗದೆ ಊರಲ್ಲಿ ಕೇಲಸ ಮಾಡಿ ಎಂದು ತರಬೇತಿಯಲ್ಲಿ ಮೆಟಿ ಶಿವಲೀಲಾ ಸ್ವಾಮಿ ತಿಳಿಸಿದರು.
ಗ್ರಾಮೀಣ ಭಾಗದ ಜನರ ಜೀವನಕ್ಕೆ ಭದ್ರತೆ ಹೆಚ್ಚಿಸಲು ವರ್ಷದಲ್ಲಿ 100 ದಿನಗಳ ಕೆಲಸ ಒದಗಿಸುವ ಗುರಿಯನ್ನು ನರೇಗಾ ಯೋಜನೆ ಹೊಂದಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ನರೇಗಾ) ದಡಿ ಒಂದು ಕುಟುಂಬದ ವಯಸ್ಕ ಸದಸ್ಯರು ಸ್ವಯಂ ಪ್ರೇರಿತರಾಗಿ ನೋಂದಣಿಯಾದರೆ ಅಂತಹವರಿಗೆ ಆರ್ಥಿಕ ವರ್ಷವೊಂದಕ್ಕೆ ನೂರು ದಿನಗಳ ಉದ್ಯೋಗ ನೀಡಲಾಗುತ್ತದೆ. ಈ ಯೋಜನೆಯು ಬಡ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.
ಸಂತೋಷ ಚ್ಯಾಂಡೆಸುರೆ ಸಂಪನ್ಮೂಲ ವ್ಯಕ್ತಿ ರಿಲಯನ್ಸ್ ಫೌಂಡೇಶನ್ ಬೀದರ್ ಹಾಗೂ ಔಟರಿಚ ಸಂಸ್ಥೆ ಬೀದರ್ ಸಿಬ್ಬಂದಿ ಇವರ ಮಾತನಾಡುತ್ತಾ ನರೇಗಾ ಯೋಜನೆ ಅಡಿ ಹಳ್ಳಿಗಳಲ್ಲಿ ಕೆರೆ, ಗೋಕಟ್ಟೆ ಹೂಳೆತ್ತುವುದು, ಕೊಳವೆ ಬಾವಿ ಮೈದಾನ,ಚೆಕ್ ಡ್ಯಾಂ, ಹೊಲಗಳಿಗೆ ಹೋಗಲು ದಾರಿ, ಕೃಷಿ ಹೊಂಡ,ಗ್ರಾಮೀಣ ಗೋದಾಮು, ಸ್ಮಶಾನ ಅಭಿವೃದ್ಧಿ, ಉದ್ಯಾನ, ಕಾಂಕ್ರಿಟ್ ರಸ್ತೆ ನಿರ್ಮಾಣದಂತಹ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ’ ಎಂದು ಹೇಳಿದರು.
ಕೃಷಿ, ತೋಟಗಾರಿಕೆ, ರೇಷ್ಮೆ ಮತ್ತು ಅರಣ್ಯ ಇಲಾಖೆಗಳ ವ್ಯಾಪ್ತಿಯಲ್ಲಿ ಕೂಡ ನರೇಗಾ ಅಡಿ ಅನೇಕ ಯೋಜನೆಗಳನ್ನು ಅನುಷ್ಟಾನಕ್ಕೆ ಅವಕಾಶವಿದೆ. ರೈತರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಬಳಿ ವಿಚಾರಣೆ ನಡೆಸಬೇಕು. ವಾರ್ಷಿಕವಾಗಿ ಪ್ರತಿ ಕುಟುಂಬಕ್ಕೆ ನರೇಗಾ ಯೋಜನೆಯಲ್ಲಿ 100 ದಿನಗಳ ಉದ್ಯೋಗ ಒದಗಿಸಲಾಗುತ್ತದೆ. ಪ್ರತಿಯೊಬ್ಬರಿಗೂ ದಿನಕ್ಕೆ ರೂ 316 ಕೂಲಿ ನೀಡಲಾಗುತ್ತದೆ’ ಎಂದರು.
MNREGA ಯೋಜನೆಯ ಉದ್ದೇಶ:-
ಈ ಯೋಜನೆಯಡಿ ಉದ್ಯೋಗಾವಕಾಶ ಕಲ್ಪಿಸುವುದು.
ಇದು ನೈಸರ್ಗಿಕ ಸಂಪನ್ಮೂಲಗಳನ್ನು ಪುನರ್ನಿರ್ಮಿಸಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯ ಮತ್ತು ಆಸ್ತಿಗಳನ್ನು ಸೃಷ್ಟಿಸುವ ಗುರಿ ಹೊಂದಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ 100 ದಿನಗಳ ಉದ್ಯೋಗ ಒದಗಿಸುವುದು.