
ಭಾಲ್ಕಿ:ಆ.24: ಇಲ್ಲಿಯ ತಾಲೂಕು ಪಂಚಾಯಿತಿ ನೂತನ ಸಹಾಯಕ ನಿರ್ದೇಶಕರಾಗಿ ಚಂದ್ರಶೇಖರ ಬನ್ನಾಳೆ ಅವರು ಅಧಿಕಾರ ಸ್ವೀಕರಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನೂತನ ಎಡಿಯಾಗಿ ಅಧಿಕಾರ ಸ್ವೀಕರಿಸಿದ ಚಂದ್ರಶೇಖರ ಬನ್ನಾಳೆ ಅವರನ್ನು ಇಓ ಸೂರ್ಯಕಾಂತ ಬಿರಾದಾರ್ ಅವರು ಸನ್ಮಾನಿಸಿ, ಗ್ರಾಮೀಣ ಭಾಗದ ಜನರಿಗೆ ನರೇಗಾ ಯೋಜನೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ.
ಚಂದ್ರಶೇಖರ ಬನ್ನಾಳೆ ಅವರು ಈ ಹಿಂದೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅನುಭವಿ ಅಧಿಕಾರಿಗಳಾಗಿದ್ದಾರೆ. ಅವರು ಇದೀಗ ಸಹಾಯಕ ನಿರ್ದೇಶಕರಾಗಿ ನೇಮಕಗೊಂಡಿರುವುದು ಸಂತಸ ತರಿಸಿದೆ. ಅವರ ಅವಧಿಯಲ್ಲಿ ಅರ್ಹರಿಗೆ ನರೇಗಾ ಸೌಲಭ್ಯ ಸಿಗುವಂತಾಗಬೇಕು ಎಂದು ತಿಳಿಸಿದರು.
ಅಧಿಕಾರ ಸ್ವೀಕರಿಸಿದ ನೂತನ ಎಡಿ ಚಂದ್ರಶೇಖರ ಬನ್ನಾಳೆ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ನರೇಗಾದ ಕಾರ್ಯಕ್ರಮಗಳು ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ್, ಅಭಿವೃದ್ಧಿ ಅಧಿಕಾರಿಗಳಾದ ಸಂಗಮೇಶ ಸಾವಳೆ, ಮತಿವಂತ್, ದಿಲೀಪ್, ನಂದಕುಮಾರ್, ತಿಪ್ಪೇಶ್, ಹಿರಿಯ ಮುಖಂಡ ಶಿವಶಂಕರ ಪಾಟೀಲ್ ಸೇರಿದಂತೆ ಹಲವರು ಇದ್ದರು.