ಸಂಜೆವಾಣಿ ವಾರ್ತೆ
ಸಿರುಗುಪ್ಪ, ಮೇ.30: ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಂದು ಮಾಳಪುರ ಕೆರೆಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಕಾರ್ಯಕ್ರಮ ನಡೆಸಲಾಯಿತು, ಹಾಗೂ ತಾಲ್ಲೂಕಿನ ಪಂಚಾಯಿತಿಗಳಾದ ಕುರುವಳ್ಳಿ ಹಾಗೂ ದೇಶನೂರು ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರೆ, ನಾಳೆ ಕೆ.ಬೆಳಗಲ್ಲು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತದೆ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ಮಡಗಿನ ಬಸಪ್ಪ ತಿಳಿಸಿದರು.