ನವೋದಯ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿ ಸಾಧನೆ

ರಾಯಚೂರು, ಮಾ.೩೧- ನವೋದಯ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಎಂ ಟೆಕ್ ಥರ್ಮಲ್ ಪವರ್ ಇಂಜಿನಿಯರಿಂಗ್ ಕೋರ್ಸಿನಲ್ಲಿ ಅಬ್ದುಲ್ ಅಝೀಜ್ ಎಂಬ ವಿದ್ಯಾರ್ಥಿಯು ವಿಶ್ವ ವಿದ್ಯಾಲಯ ಮಟ್ಟದಲ್ಲಿ ಮೂರನೇ ಶ್ರೇಣಿ ಗಳಿಸುವುದರ ಮೂಲಕ ಸಂಸ್ಥೆಗೆ ಕೀರ್ತಿಯನ್ನು ತಂದಿದ್ದಾರೆ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ . ಮಲ್ಲಿಕಾರ್ಜುನ, ಎಂ ವಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ.ಪಿ ರತ್ನಕುಮಾರ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.