
ಮೈಸೂರು,ಮೇ.೧೦-ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆಯಾದ ಬೆನ್ನಲ್ಲೇ ಮೈಸೂರಿನಲ್ಲಿ ವಧು-ವರರು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬೆಳಗ್ಗೆ ೭ ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ ೨೨೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ ೭ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಮತದಾನ ನಡೆಯಲಿದ್ದು, ೨೬೧೫ ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.