ನವ ವಿವಾಹಿತ ಜೋಡಿ ನೇಣಿಗೆ ಶರಣು

ವಿಜಯಪುರ, ಮೇ.15 :ನವ ವಿವಾಹಿತ ಜೋಡಿ ನೇಣಿಗೆ ಶರಣಾದ ದಾರುಣ ಘಟನೆ ನಗರ ಹೊರ ವಲಯದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.
ಮನೋಜಕುಮಾರ ಪೆÇೀಳ (30) ರಾಖಿ (23) ನೇಣಿಗೆ ಶರಣಾದ ಜೋಡಿ ದಂಪತಿ.
ಕಳೆದ ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ನಿನ್ನೆ ತಡರಾತ್ರಿ ಊಟ ಮಾಡಿದ ಬಳಿಕ ನೇಣಿಗೆ ಶರಣಾಗಿದ್ದಾರೆ.
ಮನೋಜಕುಮಾರ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ನೇಣು ಹಾಕಿಕೊಂಡಿದ್ದಾರೆ.
ಮನೋಜಕುಮಾರ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದರು.
ಇಂದು ಬೆಳಿಗ್ಗೆ ವಾಪಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಪೆÇಲೀಸರ ತನಿಖೆ ಬಳಿಕ ಪತಿ-ಪತ್ನಿ ಆತ್ಮಹತ್ಯೆಗೆ ಕಾರಣ ಏನೆಂಬುವುದು ಗೊತ್ತಾಗಲಿದೆ.