ನಶೆರಾಣಿ ರಾಗಿಣಿಗೆ ಹೊಟ್ಟೆನೋವು ಆಸ್ಪತ್ರೆಗೆ ದಾಖಲು

ಬೆಂಗಳೂರು,ಡಿ.೨೪- ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಜೈಲಿನಲ್ಲಿರುವ ನಟಿ ರಾಗಿಣಿ ಅವರಿಗೆ ನಿನ್ನೆ ತಡರಾತ್ರಿ ಉಸಿರಾಟ, ಹೊಟ್ಟೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಜೈಲಿನ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ನೀಡಲಾಯಿತು.
ಹೆಚ್ಚಿನ ಚಿಕಿತ್ಸೆಯ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ತಡರಾತ್ರಿಯೇ ಪರಪ್ಪನ ಅಗ್ರಹಾರ ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಗಿಣಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಈ ನಡುವೆ ಜೈಲು ಪಾಲಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಆ ಮೂಲಕ ಪರಪ್ಪನ ಅಗ್ರಹಾರ ಜೈಲಿನಲ್ಲೇ ರಾಗಿಣಿ ಹೊಸ ವರ್ಷ ಆಚರಿಸುವುದು ಅನಿವಾರ್ಯ ಆಗಿದ್ದ ಬೆನ್ನಲ್ಲೇ ಅನಾರೋಗ್ಯ ಕ್ಕೆ ತುತ್ತಾಗಿದ್ದಾರೆ.
ಕಳೆದ ಮೂರು ತಿಂಗಳಿನಿಂದ ರಾಗಿಣಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಜಾಮೀನು ಸಿಗದ ಕಾರಣ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿಯೂ ಅವರಿಗೆ ನಿರಾಸೆ ಆಗಿದೆ. ಡ್ರಗ್ಸ್ ಜಾಲದ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸೆ.೪ರಂದು ಅವರ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ನಂತರ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.