ನಾಗತಿಬಸಾಪುರ ಗ್ರಾ.ಪಂ. ಅಧ್ಯಕ್ಷರಾಗಿ ಶಾಂತಕುಮಾರಿ ಆಯ್ಕೆ


ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಜು.3: ತಾಲೂಕಿನ ನಾಗತಿಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಶಾಂತಕುಮಾರಿ, ಉಪಾಧ್ಯಕ್ಷರಾಗಿ ಕೆ.ಶಿಲ್ಪಾ ಆಯ್ಕೆಯಾದರು.
ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹೆಚ್.ಶಾಂತಕುಮಾರಿ, ಕೆ.ಶಿಲ್ಪಾ ತಲಾ 11 ಮತ ಪಡೆದು ಕ್ರಮವಾಗಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಗಳಾಗಿದ್ದ ಅರುಣಕುಮಾರ್, ಎಸ್.ರೇಖಾ 9 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಇಒ ಎಸ್.ಎಸ್.ಪ್ರಕಾಶ್ ಫಲಿತಾಂಶ ಪ್ರಕಟಿಸುತ್ತಿದ್ದಂತೆ ಅಧ್ಯಕ್ಷ-ಉಪಾಧ್ಯಕ್ಷರ ಬೆಂಬಲಿಗರು ಸಂಭ್ರಮಾಚರಿಸಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಗ್ರಾ.ಪಂ. ಸದಸ್ಯರು ಹಾಗೂ ಮುಖಂಡರು ಅಭಿನಂದಿಸಿದರು.

One attachment • Scanned by Gmail