ನಾಗನಾಳ-ಕ್ರೀಡಾ ಸಾಮಾಗ್ರಿ ವಿತರಣೆ

ಕೋಲಾರ,ಜು.೩೦: ಕ್ರೀಡೆ ನಮ್ಮ ಜೀವನದ ಒಂದು ಪ್ರಮುಖ ಭಾಗವಾಗಿದೆ, ಇದು ದೈಹಿಕವಾಗಿ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢಗೊಳ್ಳಿಸುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ರಮೇಶ್ ಬಾಬು ತಿಳಿಸಿದರು.
ಊರಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗನಾಳ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಯಂಗ್ ಇಂಡಿಯಾ ಡೆವಲಪ್ಮೆಂಟ್ ಸೊಸೈಟಿ, ಕ್ಯಾನ್ ನೆಟ್ವರ್ಕ್ ಮತ್ತು ರೋಟರಿ ಕೋಲಾರ ಲೇಕ್ ಸೈಡ್ ವತಿಯಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ ಹೂಹಳ್ಳಿ ನಾಗರಾಜ್ ಮಾತನಾಡಿದರು.
ಕ್ರೀಡೆಗಳನ್ನು ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗುತ್ತದೆ. ಹಸ್ಟ್-ಪಸ್ಟ್, ಡೈನಾಮಿಕ್ ಮತ್ತು ನಮ್ಮ ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆ ಸಹಕಾರಿಯಾಗಿದೆ ಎಂದು ಯಶಸ್ವಿ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಾಗಿರಲು, ಮಾನಸಿಕ ಬೆಳವಣಿಗೆಯು ನಮ್ಮ ಶಾಲಾ ದಿನಗಳಿಂದ ಪ್ರಾರಂಭವಾಗುತ್ತದೆ, ಆದರೆ ದೈಹಿಕ ಬೆಳವಣಿಗೆಗೆ ವ್ಯಾಯಾಮವು ಕ್ರೀಡೆಯ ಮೂಲಕ ನಾವು ಪಡೆಯುತ್ತೇವೆ ಅದರಿಂದ ಊರಗಲಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಊರಗಲಿ, ಟಿ.ಪುರಹಳ್ಳಿ, ಬುಸನಹಳ್ಳಿ ಮತ್ತು ನಾಗನಾಳ ಗ್ರಾಮದ ಶಾಲಾ ಮಕ್ಕಳಿಗೆ ವಿತರಣೆ ಮಾಡುವ ಮೂಲಕ ದೈಹಿಕ, ಮಾನಸಿಕವಾಗಿ ಸದೃಢವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಊರಗಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ, ವೆಂಕಟರಾಮಣಪ್ಪ, ಸಂಸ್ಥೆ ಕಾರ್ಯದರ್ಶಿ ಅಮ್ಮೇರಹಳ್ಳಿ ಉದಯ್ ಕುಮಾರ್, ಮುಖ್ಯೋಪಾಧ್ಯಾಯರು ಸಿಬ್ಬಂದಿ ಭಾಗವಹಿಸಿದರು.