ನಾಗರಹುಣಸೆಯಲ್ಲಿ ಜಗಜೀವನ್ ರಾಂ ಜಯಂತಿ.


ಸಂಜೆವಾಣಿ ವಾರ್ತೆ
ಕೂಡ್ಲಿಗಿ.ಏ. 6 :- : ಸಮಾಜದಲ್ಲಿರುವ ಜಾತಿ ಮತ್ತು ವರ್ಗಗಳ ನಡುವಿನ ಅಸಮಾನತೆಯನ್ನು ತೊಡೆದು ಹಾಕಿ ಸಮ ಸಮಾಜದ  ನಿರ್ಮಾಣ ಮಾಡುವಲ್ಲಿ ಡಾ.ಬಾಬು ಜಗಜೀವನ ರಾಂ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಮುಖ್ಯಗುರುಗಳಾದ ವಿಜಯ್ ಕುಮಾರ್ ತಿಳಿಸಿದರು.
 ಅವರು ತಾಲೂಕಿನ ನಾಗರಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಭಾರತದ ಮಾಜಿ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ
ಅಸಮಾನತೆ ವಿರುದ್ಧ ಹೋರಾಟ ನಡೆಸಿದ ಡಾ.ಬಾಬು ಜಗಜೀವನ ರಾಂ ಅವರು ಕೆಂದ್ರದ ಹಲವು ಖಾತೆಯ  ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಸದಾ ಕ್ರಿಯಾಶೀಲತೆಯಿಂದ ಅಪಾರ ಜ್ಞಾನ ಹೊಂದಿದ್ದರು. ಅವರ ಹೋರಾಟ ಹಾಗೂ ಜೀವನದ ಮೌಲ್ಯಗಳು ಪ್ರತಿಯೊಬ್ಬರಿಗೂ ಇಂದಿಗೂ ಆದರ್ಶ ಎಂದರು.
ಈ ಸಂದರ್ಭದಲ್ಲಿ ನಾಗರಹುಣಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ವಿಜಯ್ ಕುಮಾರ್.ಅತಿಥಿ ಶಿಕ್ಷಕರಾದ ಶರಣಬಸಪ್ಪ.ಶಾಲಾ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.