
ದಾವಣಗೆರೆ.ಏ.೨೮ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ್ ಲೋಕಿಕೆರೆ ಪರವಾಗಿ ಶಾಸಕರಾದ ಎಸ್.ಎ. ರವೀಂದ್ರನಾಥ್ ಮತಯಾಚಿಸಿದರು.ನಗರದ ಆಂಜನೇಯ ಬಡಾವಣೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಪ್ರಚಾರಕ್ಕೆ ನಾಗರಾಜ್ ಲೋಕಿಕೆರೆ ಅವರೊಂದಿಗೆ ಶಾಸಕರಾದ ಎಸ್.ಎ. ರವೀಂದ್ರನಾಥ್ ಅವರು ಮತ ಪ್ರಚಾರ ನಡೆಸಿ, ನಾಗರಾಜ್ ಲೋಕಿಕೆರೆ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಹಿರಿಯರಾದ ಕೆ.ಬಿ. ಶಂಕರ್ ನಾರಾಯಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಸ್.ಎ. ರವೀಂದ್ರನಾಥ್ ಅವರ ಪುತ್ರಿ ವೀಣಾ ನಂಜಪ್ಪ, ಉತ್ತರ ಚುನಾವಣಾ ಉಸ್ತುವಾರಿ ಹೆಚ್.ಎನ್. ಶಿವಕುಮಾರ್, ಜಿಲ್ಲಾ ಉಪಾಧ್ಯಕ್ಷ ಶಿವರಾಜ್ ಪಾಟೀಲ್, ಬಿಜೆಪಿ ಮುಖಂಡರಾದ ತ್ಯಾವಣಿಗೆ ವೀರಭದ್ರಸ್ವಾಮಿ, ಡಿ.ಎಸ್. ಶಿವಶಂಕರ್, ಹೇಮಂತ್ ಕುಮಾರ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದರು.