
ದಾವಣಗೆರೆ.ಏ.೩೦ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ್ ಲೋಕಿಕೆರೆ ಅವರ ಪರ ವಿವಿಧ ಸಮುದಾಯಗಳು ಬೆಂಬಲಕ್ಕೆ ನಿಂತಿವೆ.ಇಂದು ನೇಕಾರ ಸಮಾಜ, ಕುಂಬಾರ ಸಮಾಜ, ಗಂಗಮತಸ್ಥ ಸಮಾಜ ಹಾಗೂ ಉಪ್ಪಾರ ಸಮಾಜದವರು ಪ್ರತ್ಯೇಕ ಸಭೆಗಳನ್ನು ನಡೆಸಿದವು.ಎಲ್ಲರೂ ಒಟ್ಟಾಗಿ ಸೇರಿ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಶಾಸಕ ಎಸ್.ಎ. ರವೀಂದ್ರನಾಥ್ ಅವರ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿ ಬಿಜೆಪಿ ಗೆಲ್ಲಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜ್ ಲೋಕಿಕೆರೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ದೇವರಮನೆ ಶಿವಕುಮಾರ್, ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ಸಂಗನಗೌಡ್ರು, ಹೆಚ್.ಎನ್. ಶಿವಕುಮಾರ್ ಸೇರಿದಂತೆ ಇತರರು ಇದ್ದರು.